ಪ್ರೀತಂ ಗುಬ್ಬಿ ನಿರ್ದೇಶನದ ಗೋಲ್ಡನ್*ಗಣೇಶ್ ನಟನೆಯ ‘ಬಾನ ದಾರಿಯಲ್ಲಿ’ ಸಿನಿಮಾ ಚಿತ್ರೀಕರಣವನ್ನು ಇಂದು ಮಂಗಳೂರಿನಲ್ಲಿ ಆರಂಭಿಸಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಗಣೇಶ್ ಈ ಚಿತ್ರದಲ್ಲಿ ಕ್ರಿಕೆಟ್ ಆಟಗಾರನ ಪಾತ್ರದಲ್ಲಿ ಅಭಿನಯಿಸಿದ್ದು, ಬೆಂಗಳೂರಿನಲ್ಲಿ ಈಗಾಗಲೇ ಬಹುತೇಕ ಶೂಟಿಂಗ್ ಕಂಪ್ಲೀಟ್ ಮಾಡಲಾಗಿದೆ.
ಈ ಚಿತ್ರದಲ್ಲಿ ‘ಏಕ್ ಲವ್ ಯಾ’ ಖ್ಯಾತಿಯ ರೇಷ್ಮಾ ನಾಣಯ್ಯ ಹಾಗೂ ರುಕ್ಮಿಣಿ ವಸಂತ್ ನಾಯಕಿಯರಾಗಿ ಅಭಿನಯಿಸಿದ್ದು, ಶ್ರೀವಾರಿ ಟಾಕೀಸ್ ಬ್ಯಾನರ್ ನಡಿ ನಿರ್ಮಿಸಲಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಇದೊಂದು ಸ್ಪೋರ್ಟ್ಸ್ ಹಾಗೂ ರೊಮ್ಯಾಂಟಿಕ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.