
ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಅಲ್ಲದೆ ತನಿಖೆಯ ಪ್ರಗತಿ ಕುರಿತು ಮಾಹಿತಿ ಪಡೆದುಕೊಳ್ಳುವ ಸಲುವಾಗಿ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಗೃಹ ಸಚಿವರು ಸಭೆ ನಡೆಸಲಿದ್ದಾರೆ.
ಸಚಿವರ ಈ ಭೇಟಿ ಸಂದರ್ಭದಲ್ಲಿ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್, ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ, ಡಿಸಿಪಿ ಅಂಶುಕುಮಾರ್ ಮೊದಲಾದವರಿದ್ದರು.