ಶಿರಾಡಿ ಮೂಲಕ ಮಂಗಳೂರು – ಬೆಂಗಳೂರು ನಡುವೆ ಸಂಚರಿಸುವವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ದೋಣಿಗಲ್ ಬಳಿ ಭೂ ಕುಸಿತದಿಂದ ಸ್ಥಗಿತಗೊಳಿಸಲಾಗಿದ್ದ ರಸ್ತೆ ಸಂಚಾರವನ್ನು ಈಗ ನಿಗದಿತ ಅವಧಿಯಲ್ಲಿ ಪುನರಾರಂಭಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈಗ ಬದಲಿ ರಸ್ತೆ ಅಭಿವೃದ್ಧಿಪಡಿಸಲಾಗಿದ್ದು, ಬೆಳಗ್ಗೆ 6 ರಿಂದ ಸಂಜೆ 6 ರ ವರೆಗೆ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಈ ಮಾರ್ಗದಲ್ಲಿ ಮಂಗಳೂರಿಂದ ಬೆಂಗಳೂರು ಕಡೆಗೆ ಹೋಗುವ ವಾಹನಗಳು ಬೆಳಗ್ಗೆ 6ರಿಂದ 8 ಗಂಟೆಯವರೆಗೆ ಹಾಗೂ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಸಂಚರಿಸಬಹುದಾಗಿದೆ.
ಅದೇ ರೀತಿ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳು ಬೆಳಗ್ಗೆ 9 ರಿಂದ 11 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 6 ಗಂಟೆಯವರೆಗೆ ಸಂಚರಿಸಬಹುದಾಗಿದೆ.