ಮಂಡ್ಯ: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರವೇ ಗೊಂದಲದಲ್ಲಿರುವ ನಡುವೆಯೇ ಮಂಡ್ಯ ಜಿಲ್ಲಾಡಳಿತ ಅಚ್ಚರಿಯ ನಿರ್ಧಾರ ಕೈಗೊಂಡಿದೆ. ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಮಂಡ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಮಾತ್ರವಲ್ಲ, ಜಿಲ್ಲೆಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಜನವರಿ 31ವರೆಗೆ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದ್ದು, ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಿಥಿ ತಿಳಿಸಿದ್ದಾರೆ.
ಜನವರಿ ಅಂತ್ಯದವರೆಗೂ ನಿಷೇಧಾಜ್ಞೆ ಮುಂದುವರೆಯಲಿದೆ. ಅಂತ್ಯಸಂಸ್ಕಾರ, ತಿಥಿ ಕಾರ್ಯಕ್ಕೆ 30 ಜನರಿಗೆ ಅವಕಾಶ, ಜಾತ್ರೆ, ದನದ ಜಾತ್ರೆ, ಗ್ರಾಮದೇವತೆ ಹಬ್ಬಕ್ಕೆ ಅವಕಾಶವಿಲ್ಲ. ವಿಶೇಷ ದಿನಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.