alex Certify ಮಕ್ಕಳಲ್ಲಿ ಕಾಣಿಸಿಕೊಳ್ಳುವ ಮಲಬದ್ಧತೆ ಸಮಸ್ಯೆ ನಿವಾರಿಸಲು ಹೀಗೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಲ್ಲಿ ಕಾಣಿಸಿಕೊಳ್ಳುವ ಮಲಬದ್ಧತೆ ಸಮಸ್ಯೆ ನಿವಾರಿಸಲು ಹೀಗೆ ಮಾಡಿ

ಮಲಬದ್ಧತೆ ಸಮಸ್ಯೆ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಕಾಡುತ್ತದೆ. ಅದರಲ್ಲೂ ಚಿಕ್ಕಮಕ್ಕಳಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ ಎನ್ನುಬಹುದು. ಇದರಿಂದ ಆ ಮಕ್ಕಳು ತುಂಬಾನೇ ನೋವು ಕೂಡ ಅನುಭವಿಸುತ್ತಾರೆ. ಮಕ್ಕಳಲ್ಲಿ ಕಾಡುವ ಈ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಇಲ್ಲಿದೆ ನೋಡಿ ಒಂದಷ್ಟು ಟಿಪ್ಸ್.

5 ವರ್ಷದ ಮೇಲಿನ ಮಕ್ಕಳಿಗಾದರೆ 8-10 ಒಣದ್ರಾಕ್ಷಿಯನ್ನು 2 ಟೇಬಲ್ ಸ್ಪೂನ್ ಬಿಸಿ ನೀರಿನಲ್ಲಿ 10 ನಿಮಿಷಗಳ ಕಾಲ ನೆನೆಸಿಡಿ. ನಂತರ ಇದನ್ನು ಚೆನ್ನಾಗಿ ಹಿಸುಕಿ ಸಿಪ್ಪೆ ಬೇರ್ಪಡಿಸಿ ಅದರ ರಸವನ್ನು ಮಕ್ಕಳಿಗೆ ಕುಡಿಸಿ.

ಹಾಗೇ 3 ಟೇಬಲ್ ಸ್ಪೂನ್ ನಷ್ಟು ಹೆಸರುಬೇಳೆಯನ್ನು ಚೆನ್ನಾಗಿ ಬೇಯಿಸಿಕೊಂಡು ನಂತರ ಇದನ್ನು ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಅದಕ್ಕೆ 1 ಚಮಚ ತುಪ್ಪ ಸೇರಿಸಿ ಮಕ್ಕಳಿಗೆ ಕೊಡಿ.

ಹಾಗೇ ಪುಟ್ಟಬಾಳೆ ಹಣ್ಣನ್ನು ದಿನಕ್ಕೆ ಒಂದು ಕೊಡಿ. ಬಿಸಿ ಬಿಸಿ ನೀರನ್ನು ಕುಡಿಸಿ. ನಾರಿನಾಂಶವಿರುವ ಆಹಾರವನ್ನು ಹೆಚ್ಚೆಚ್ಚು ಸೇವಿಸಲು ಕೊಡಿ. ಇದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...