alex Certify ಮಕ್ಕಳಲ್ಲಿನ ಅಪೌಷ್ಟಿಕತೆ ತೊಲಗಿಸಲು ಮುಂದಾದ ತೋಟಗಾರಿಕೆ ಇಲಾಖೆ; ಪೌಷ್ಟಿಕ ಕೃಷಿ ಮೂಲಕ ಹೊಸ ಹೆಜ್ಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಲ್ಲಿನ ಅಪೌಷ್ಟಿಕತೆ ತೊಲಗಿಸಲು ಮುಂದಾದ ತೋಟಗಾರಿಕೆ ಇಲಾಖೆ; ಪೌಷ್ಟಿಕ ಕೃಷಿ ಮೂಲಕ ಹೊಸ ಹೆಜ್ಜೆ

ಕೋವಿಡ್ ಕಾಲದಲ್ಲಿ ತರಕಾರಿ, ಹಣ್ಣುಗಳನ್ನು ಶುಚಿಗೊಳಿಸಿ ಬಳಸುವ ಬಗೆ ಹೇಗೆ? | Prajavaniಕಲಬುರಗಿ : ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರವು ಇತ್ತೀಚೆಗಷ್ಟೇ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಪರ – ವಿರೋಧದ ಮಧ್ಯೆಯೂ ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ. ಇದರೊಂದಿಗೆ ತೋಟಗಾರಿಕೆ ಇಲಾಖೆ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ.

ಈ ಭಾಗದ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಿಸುವುದಕ್ಕಾಗಿ ಪೌಷ್ಟಿಕ ಕೈತೋಟಕ್ಕೆ ಕಲಬುರಗಿ ತೋಟಗಾರಿಕೆ ಇಲಾಖೆ ಮುಂದಾಗಿದ್ದು, ಸರ್ಕಾರಿ ಶಾಲೆಗಳಲ್ಲಿನ ಮೈದಾನದಲ್ಲಿಯೇ ಈ ಕಾರ್ಯ ಆರಂಭಿಸಲಾಗಿದೆ. ಸಾವಯವ ಕೃಷಿ ಪದ್ಧತಿಯಲ್ಲಿ ತರಕಾರಿಗಳನ್ನು ಬೆಳೆದು, ಅವುಗಳನ್ನು ಮಧ್ಯಾಹ್ನದ ಬಿಸಿ ಊಟಕ್ಕೆ ಬಳಕೆ ಮಾಡಿಕೊಳ್ಳುವಂತೆ ಮಾಡಲಾಗುತ್ತಿದೆ.

ಇದರಿಂದ ಮಕ್ಕಳ ಆರೋಗ್ಯ ಸುಧಾರಿಸುವುದರ ಮೂಲಕ ಅವರಿಗೆ ಕೃಷಿಯ ಬಗ್ಗೆಯೂ ತಿಳಿಯುತ್ತದೆ ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಇನ್ನಿತರ ಜಿಲ್ಲೆಗಳನ್ನು ಗಮನಿಸಿದರೆ, ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಲ್ಲಿಯೇ ರಕ್ತಹೀನತೆ ಹಾಗೂ ಅಪೌಷ್ಟಿಕತೆ ಹೆಚ್ಚಾಗಿ ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿಯೇ ತೋಟಗಾರಿಕೆ ಇಲಾಖೆಯು ಈ ಯೋಜನೆಯನ್ನು ಆರಂಭಿಸಿದೆ.

ಅದರಲ್ಲಿಯೂ ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಯಲ್ಲಿನ ಮಕ್ಕಳಲ್ಲಿ ಹೆಚ್ಚಾಗಿ ಅಪೌಷ್ಟಿಕತೆ ಕಂಡು ಬರುತ್ತಿದೆ. ಕಲಬುರಗಿ ಜಿಲ್ಲೆಯ ಸುಮಾರು 200ಕ್ಕೂ ಹೆಚ್ಚಿನ ಶಾಲೆಗಳಲ್ಲಿ ಈ ಯೋಜನೆ ಆರಂಭವಾಗಿದೆ. ಹಣ್ಣಿನ ಗಿಡಗಳು ಸೇರಿದಂತೆ ಸೊಪ್ಪು ಹಾಗೂ ತರಕಾರಿಗಳನ್ನು ಈ ತೋಟದಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆಯಲಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...