
ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಯಾವಾಗಲೂ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಇದರಿಂದ ಅವರ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಆದ್ದರಿಂದ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಎಳನೀರನ್ನು ಕೊಡಬಹುದು.
ಮಕ್ಕಳ ಆರೋಗ್ಯವನ್ನು ವೃದ್ಧಿಸಲು ಬಯಸಿದರೆ ಎಳನೀರಿನೊಂದಿಗೆ ಸ್ವಲ್ಪ ನಿಂಬೆ ರಸವನ್ನು ಬೆರೆಸಿ ಕುಡಿಸಬೇಕು. ಇದರಿಂದ ದೇಹದ ಆರೋಗ್ಯ ವೃದ್ಧಿಯಾಗುತ್ತದೆ.
ಎಳನೀರು ದೇಹಕ್ಕೆ ಹಲವು ರೋಗಗಳು ತಗುಲದಂತೆ ನಿಯಂತ್ರಿಸುತ್ತದೆ. ಅಷ್ಟೇ ಅಲ್ಲದೆ ಎಳನೀರಿನಲ್ಲಿ ಹಲವು ಪೋಷಕಾಂಶಗಳಿವೆ ಹಾಗೂ ಅನಾರೋಗ್ಯ ಸಮಸ್ಯೆಯನ್ನು ದೂರ ಮಾಡುವಂತ ಗುಣಗಳನ್ನು ಹೊಂದಿದೆ. ಆದ್ದರಿಂದ ಮಕ್ಕಳು ಉತ್ತಮ ಆರೋಗ್ಯವನ್ನು ಪಡೆಯಲು ಹಾಗೂ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ದಿನಕ್ಕೊಮ್ಮೆ ಅಥವಾ ವಾರದಲ್ಲಿ ಮೂರು ನಾಲ್ಕು ಬಾರಿ ಎಳನೀರಿನ ಜೊತೆ ನಿಂಬೆ ರಸ ಬೆರೆಸಿ ಕುಡಿಸಿದರೆ ಒಳ್ಳೆಯದು.