alex Certify ಮಕ್ಕಳಾಗಿಲ್ಲ ಎಂಬ ಕೊರಗು; ಆತ್ಮಹತ್ಯೆಗೆ ಶರಣಾದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಾಗಿಲ್ಲ ಎಂಬ ಕೊರಗು; ಆತ್ಮಹತ್ಯೆಗೆ ಶರಣಾದ ಮಹಿಳೆ

ಬೆಂಗಳೂರು : ಮಕ್ಕಳಾಗಿಲ್ಲ ಎಂಬ ನೋವಿನಲ್ಲಿದ್ದ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ನೆಲಮಂಗಲದ ಹತ್ತಿರದ ಮಾದನಾಯಕನಹಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಾಗ್ಯಮ್ಮ(30) ಎಂಬ ಮಹಿಳೆಯೇ ನೇಣು ಹಾಕಿಕೊಂಡು ಸಾವನ್ನಪ್ಪಿದವರು. ಇವರಿಗೆ ಮದುವೆಯಾಗಿ 11 ವರ್ಷಗಳಾಗಿದ್ದವು. ಆದರೂ ಅವರಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾನಸಿಕವಾಗಿ ಹೆಚ್ಚು ವೇದನೆ ಪಡುತ್ತಿದ್ದರು ಎನ್ನಲಾಗಿದೆ.

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನವರಾದ ಇವರು, ಕಳೆದ 5 ವರ್ಷಗಳಿಂದ ಬೆಂಗಳೂರಿನ ಸಿದ್ದನಹೊಸಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮಕ್ಕಳಿಗಾಗಿ ಕಂಡ ಕಂಡ ವೈದ್ಯರಿಗೆಲ್ಲ ತೋರಿಸಿದ್ದಾರೆ. ಆದರೂ ಮಕ್ಕಳಾಗಿಲ್ಲ.

ಹೀಗಾಗಿ ನೊಂದುಕೊಂಡಿದ್ದ ಇವರು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...