
ಬೆಂಗಳೂರು: ಯಶವಂತಪುರ ಆಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನು ಅಮಾನತು ಮಾಡಲಾಗಿದೆ.
ಘಟನೆ ವಿರೋಧಿಸಿ, ಶಿಕ್ಷಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೋಷಕರು ಪ್ರತಿಭಟನೆ ನಡೆಸಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚನೆಯಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನು ಅಮಾನತು ಮಾಡಲಾಗಿದೆ.