15 ರಿಂದ 18 ವರ್ಷದವರಿಗೆ ಕೊರೊನಾ ಲಸಿಕೆ ಆರಂಭವಾಗಿ ಕೇವಲ 2 ವಾರಗಳ ಅವಧಿಯಲ್ಲಿ ತಮಿಳುನಾಡಿನಲ್ಲಿ 15 ರಿಂದ 18 ವರ್ಷ ಪ್ರಾಯದ ಎಲ್ಲಾ ಶಾಲಾ ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾಹಿತಿ ನೀಡಿದ್ದಾರೆ.
ತಮಿಳುನಾಡಿನಲ್ಲಿ 15 ರಿಂದ 18 ವರ್ಷದೊಳಗಿನ 100 ಪ್ರತಿಶತ ಮಕ್ಕಳಿಗೆ ಮೊದಲ ಡೋಸ್ ಕೊರೊನಾ ಲಸಿಕೆಯನ್ನು ನೀಡಲಾಗಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಮಾಹಿತಿ ನೀಡಿದರು.
15 ರಿಂದ 18 ವರ್ಷ ಪ್ರಾಯದ ಮಕ್ಕಳಿಗೆ ದೇಶದಲ್ಲಿ ಜನವರು 3ನೇ ತಾರೀಖಿನಿಂದ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿತ್ತು.
2007ನೇ ಇಸ್ವಿ ಅಥವಾ ಅದಕ್ಕೂ ಮೊದಲು ಜನಿಸಿದ ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಕೇಂದ್ರ ಸರ್ಕಾರ ಮಾನ್ಯ ಮಾಡಿದೆ. ಕೇಂದ್ರ ಸರ್ಕಾರವು ಭಾರತ್ ಬಯೋಟೆಕ್ನ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ನ್ನು ಬಳಕೆ ಮಾಡುವಂತೆ ಅನುಮತಿ ನೀಡಿದೆ.
ವಿದ್ಯಾರ್ಥಿಗಳು ಕೋವಿನ್ ಪೋರ್ಟಲ್ ಮೂಲಕ ಲಸಿಕೆಗೆ ನೋಂದಣಿ ಮಾಡಬಹುದು ಅಥವಾ ಲಸಿಕಾ ಕೇಂದ್ರಗಳಲ್ಲಿ ಐಡಿ ಕಾರ್ಡ್ ನೀಡಿ ಕೊರೊನಾ ಲಸಿಕೆಗಳನ್ನು ಪಡೆಯಬಹುದಾಗಿದೆ.