alex Certify ಮಗಳನ್ನು ಶಾಲೆಗೆ ಸೇರಿಸಿ ಬರುವಾಗಲೇ ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳನ್ನು ಶಾಲೆಗೆ ಸೇರಿಸಿ ಬರುವಾಗಲೇ ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ತಂದೆ

ತಂದೆಯೊಬ್ಬರು ತಮ್ಮ ಮಗಳನ್ನು ವಸತಿ ಶಾಲೆಗೆ ಸೇರಿಸಿ ಪತ್ನಿ ಹಾಗೂ ಮಗಳೊಂದಿಗೆ ವಾಪಸ್ ಬರುವಾಗ ನಿಯಂತ್ರಣ ತಪ್ಪಿದ ಕಾರು ಉರುಳಿ ಬಿದ್ದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಡುಬ ಬಳಿ ನಡೆದಿದೆ.

ತರೀಕೆರೆಯ ವಕೀಲ ಸಂಪತ್ ಎಂಬವರು ಮೃತ ದುರ್ದೈವಿಯಾಗಿದ್ದು, ಇವರು ತಮ್ಮ ಮಗನನ್ನು ಮೂಡುಬಿದರೆಯ ವಸತಿ ಶಾಲೆಗೆ ಸೇರಿಸಿ ಭಾನುವಾರದಂದು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಪಸ್ ಊರಿಗೆ ತೆರಳುತ್ತಿದ್ದರು.

ಮಧ್ಯಾಹ್ನದ ಸುಮಾರಿಗೆ ಮುಡಬ ಚೌಡೇಶ್ವರಿ ದೇವಸ್ಥಾನದ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಅಡಿಕೆ ತೋಟದಲ್ಲಿ ಮಗುಚಿ ಬಿದ್ದಿದೆ. ಇದರ ಪರಿಣಾಮ ಸಂಪತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅವರ ಪತ್ನಿ ಹಾಗೂ ಮಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...