
ಶಿರಸಿ: ಮಗಳನ್ನು ದುಬೈಗೆ ವಿಮಾನ ಹತ್ತಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಮಹಿಳೆ ಸೇರಿ ಇಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಹೊರವಲಯದಲ್ಲಿ ನಡೆದಿದೆ.
ಜಯಂತಿ (50) ಹಾಗೂ ವಿಠಲ್ (47) ಮೃತರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಹುಲೇಕಲ್ ಗ್ರಾಮದವರು. ಮಗಳನ್ನು ದುಬೈ ವಿಮಾನಕ್ಕೆ ಹತ್ತಿಸಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಊರಿಗೆ ವಾಪಸ್ ಆಗುತ್ತಿದ್ದರು. ನಿದ್ದೆ ಮಂಪರಿನಲ್ಲಿ ಕಾರು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಕಾರು ಚಾಲಕ ಹಾಗೂ ಮಹಿಳೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.