ಯುವಕನೊಬ್ಬ ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿದ್ದು ಆಕೆ ಈಗ ಮಗುವಿಗೆ ಜನ್ಮ ನೀಡಿದ್ದಾಳೆ. ಇದೀಗ ಪೊಲೀಸರು ಯುವಕನನ್ನು ಪೋಕ್ಸೋ ಅಡಿ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಇಂತಹದೊಂದು ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದ್ದು, 26 ವರ್ಷದ ಮಹದೇವಸ್ವಾಮಿ ಬಂಧಿತ ಯುವಕನಾಗಿದ್ದಾನೆ. ಈತ ಗುಂಡ್ಲುಪೇಟೆ ತಾಲೂಕಿನ ಗ್ರಾಮದವನಾಗಿದ್ದು ಮದುವೆಯ ಬಳಿಕ ಬೇಗೂರಿನಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ.
17 ವರ್ಷ 2 ತಿಂಗಳು ವಯಸ್ಸಿನ ಬಾಲಕಿ ಗರ್ಭಿಣಿಯಾದ ಬಳಿಕ ಆಕೆಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದು ತಾಯಿ – ಮಗು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.