ಮಂಗಳೂರು: ಪುಟ್ಟ ಮಗುವಿನ ಮೇಲೆ ಗ್ಯಾಂಗ್ ರೇಪ್ ನಡೆಸಿ, ಹತ್ಯೆಗೈದು ಪರಾರಿಯಾಗಿದ್ದ ನಾಲ್ವರು ಕಾಮುಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಮಧ್ಯಪ್ರದೇಶ ಹಾಗೂ ಜಾರ್ಖಂಡ್ ಮೂಲದವರು ಎಂದು ತಿಳಿದುಬಂದಿದೆ. ನವೆಂಬರ್ 21ರಂದು ಸಂಜೆ ಬಾಲಕಿಯನ್ನು ಅಪಹರಿಸಿದ್ದ ಆರೋಪಿಗಳು ಟೈಲ್ಸ್ ಫ್ಯಾಕ್ಟರಿ ಆವರಣದಲ್ಲಿ ಪೈಶಾಚಿಕ ಕೃತ್ಯವೆಸಗಿ ಬಳಿಕ ಮೃತದೇಹವನ್ನು ಫ್ಯಾಕ್ಟರಿ ಡ್ರೈನೇಜ್ ಗೆ ಬಿಸಾಕಿ ಹೋಗಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಂಗಳೂರು ಪೊಲೀಸರು ಫ್ಯಾಕ್ಟರಿಯಲ್ಲಿಯೇ ಕೆಲಸ ಮಾಡುತ್ತಿದ್ದ 20 ಜನರನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಕೃತ್ಯದ ಬಗ್ಗೆ ಗೊತ್ತಾಗಿದ್ದು, ನಾಲ್ವರನ್ನು ಬಂಧಿಸಿದ್ದಾರೆ.