ರಾಜ್ಯ ವಿಧಾನಸಭಾ ಚುನಾವಣೆ ಇಂದು ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕುಟುಂಬ ಸದಸ್ಯರೊಂದಿಗೆ ಶಿಕಾರಿಪುರ ಕ್ಷೇತ್ರದಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.
ಇದಕ್ಕೂ ಮುನ್ನ ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನ ಹಾಗೂ ರಾಘವೇಂದ್ರ ಸ್ವಾಮಿ ಮಠಕ್ಕೆ ಪುತ್ರ ಬಿ.ವೈ. ರಾಘವೇಂದ್ರ ಹಾಗೂ ವಿಜಯೇಂದ್ರ ಅವರೊಂದಿಗೆ ಭೇಟಿ ನೀಡಿದ ಯಡಿಯೂರಪ್ಪನವರು ಪೂಜೆ ಸಲ್ಲಿಸಿದ್ದಾರೆ.
ಕುಟುಂಬ ಸದಸ್ಯರೊಂದಿಗೆ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಯಡಿಯೂರಪ್ಪನವರು ಮತಗಟ್ಟೆ ಸಂಖ್ಯೆ 134 ರಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಗೆಲುವಿನ ವಿಶ್ವಾಸದಲ್ಲಿದ್ದಾರೆ.