ಒಂದಕ್ಕಿಂತ ಹೆಚ್ಚು ಕಡೆ ಮತದಾನ ಹಕ್ಕು ಹೊಂದಿರುವವರನ್ನು ಗುರುತಿಸುವ ಸಲುವಾಗಿ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆಯನ್ನು ಮಾಡಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ.
ಆದರೆ ಕೆಲವೊಂದು ಮಾಧ್ಯಮಗಳಲ್ಲಿ, ಮತದಾರರು ತಮ್ಮ ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ ಅಂತವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಚಿಂತನೆ ನಡೆಸಲಾಗಿದೆ ಎಂದು ವರದಿ ಮಾಡಿದ್ದವು.
ಈ ಕುರಿತಂತೆ ಇದೀಗ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದ್ದು, ಮತದಾರರ ಗುರುತಿನ ಚೀಟಿ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಲ್ಲ ಎಂದು ತಿಳಿಸಿದೆ.
ಮತದಾರರು ಸ್ವಯಂ ಪ್ರೇರಿತವಾಗಿ ಆಧಾರ್ ಸಂಖ್ಯೆ ಅಥವಾ ಇತರೆ ದಾಖಲೆಗಳ ಮೂಲಕವೂ ದೃಢೀಕರಿಸಿ ಜೋಡಣೆ ಮಾಡಬಹುದು ಎಂದು ಚುನಾವಣಾ ಆಯೋಗ ಹೇಳಿದೆ. ಅಲ್ಲದೆ ಜೋಡಣೆ ಮಾಡದಿರುವವರನ್ನು ಮತದಾರರ ಪಟ್ಟಿಯಿಂದ ಕೈ ಬಿಡುವ ಯಾವುದೇ ಉದ್ದೇಶವಿಲ್ಲ ಎಂದು ತಿಳಿಸಲಾಗಿದೆ.