alex Certify ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಕುರಿತು ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ / ಬದಲಾವಣೆ ಕುರಿತು ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 24ರ ವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಇದರ ವಿವರ ಕೆಳಗಿನಂತಿದೆ.

ಹೆಸರು ಸೇರ್ಪಡೆ, ತಿದ್ದುಪಡಿ / ಬದಲಾವಣೆ ಮಾಡಬಯಸುವ ಮತದಾರರು voter helpline application ಡೌನ್ಲೋಡ್ ಮಾಡಿಕೊಂಡು ಅಥವಾ www nvsp.in ವೆಬ್ ಸೈಟ್ ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿಯೂ ಸಹ ಈ ಕುರಿತು ಅರ್ಜಿ ಸಲ್ಲಿಸಬಹುದಾಗಿದೆ.

ಹೊಸ ಮತದಾರರ ನೋಂದಣಿಗಾಗಿ ನಮೂನೆ 6, ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ನಮೂನೆ 7, ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಮಾಡಲು ನಮೂನೆ 6ಬಿ, ಹಾಗೂ ವಿಳಾಸ ಬದಲಾವಣೆ, ಬದಲಿ ಮತದಾರರ ಗುರುತಿನ ಚೀಟಿ ನೀಡುವಿಕೆಗಾಗಿ, ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಳಿಗಾಗಿ, ಅಂಗವಿಕಲ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ಗುರುತಿಸಲು ನಮೂನೆ 8 ನೀಡಬೇಕಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...