ರಾಜ್ಯ ಸರ್ಕಾರ, ಮತಾಂತರ ನಿಷೇಧ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಮುಂದಾಗಿರುವುದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರದ ಈ ಕ್ರಮ ಕಳವಳಕಾರಿಯಾಗಿದೆ ಎಂದು ಹೇಳಿದ್ದಾರೆ.
ಮತಾಂತರದ ಕಾರಣಕ್ಕೆ ಕುಟುಂಬಗಳು ಛಿದ್ರವಾಗುತ್ತಿರುವುದನ್ನು ಮನಗಂಡು ಈ ಹಿಂದಿನ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ್ದು, ಗೋ ಹತ್ಯೆ ತಡೆಯುವ ಸಲುವಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಆದರೆ ಈ ಎರಡೂ ಕಾಯ್ದೆಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದು ಕಳವಳಕಾರಿಯಾಗಿದೆ ಎಂದು ಹೇಳಿರುವ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಜನಾಭಿಪ್ರಾಯ ಪಡೆದು ಇವುಗಳನ್ನು ಹಿಂಪಡೆಯದೆ ಮುಂದುವರೆಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿದ್ದಾರೆ.