alex Certify ಮತಾಂತರ – ಗೋಹತ್ಯೆ ನಿಷೇಧ ಹಿಂಪಡೆಯುವುದಕ್ಕೆ ಪೇಜಾವರ ಶ್ರೀಗಳ ವಿರೋಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತಾಂತರ – ಗೋಹತ್ಯೆ ನಿಷೇಧ ಹಿಂಪಡೆಯುವುದಕ್ಕೆ ಪೇಜಾವರ ಶ್ರೀಗಳ ವಿರೋಧ

ರಾಜ್ಯ ಸರ್ಕಾರ, ಮತಾಂತರ ನಿಷೇಧ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಮುಂದಾಗಿರುವುದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರದ ಈ ಕ್ರಮ ಕಳವಳಕಾರಿಯಾಗಿದೆ ಎಂದು ಹೇಳಿದ್ದಾರೆ.

ಮತಾಂತರದ ಕಾರಣಕ್ಕೆ ಕುಟುಂಬಗಳು ಛಿದ್ರವಾಗುತ್ತಿರುವುದನ್ನು ಮನಗಂಡು ಈ ಹಿಂದಿನ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ್ದು, ಗೋ ಹತ್ಯೆ ತಡೆಯುವ ಸಲುವಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಆದರೆ ಈ ಎರಡೂ ಕಾಯ್ದೆಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದು ಕಳವಳಕಾರಿಯಾಗಿದೆ ಎಂದು ಹೇಳಿರುವ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಜನಾಭಿಪ್ರಾಯ ಪಡೆದು ಇವುಗಳನ್ನು ಹಿಂಪಡೆಯದೆ ಮುಂದುವರೆಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...