ಬೆಳಗಾವಿ: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಬೆಂಬಲ ನೀಡಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಮತಾಂತರ ನಿಷೇಧ ಕಾಯ್ದೆ ಮಂಡಿಸುತ್ತಿದ್ದೇವೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ ಜನರ ಹಿತದೃಷ್ಟಿಯಿಂದ ರಾಜ್ಯದಲ್ಲಿಯೂ ಈ ಕಾಯ್ದೆ ಜಾರಿಗೆ ಬರಲಿದೆ. ಈ ನಿಟ್ಟಿನಲ್ಲಿ ಯಾರೂ ಕೂಡ ಮಸೂದೆಗೆ ವಿರೋಧ ವ್ಯಕ್ತಪಡಿಸಬಾರದು. ಎಲ್ಲರೂ ಸರ್ವಾನುಮತದಿಂದ ಮಸೂದೆಗೆ ಬೆಂಬಲ ನೀಡಬೇಕು ಎಂದು ತಿಳಿಸಿದ್ದಾರೆ.
ಸಫಾರಿ ವಾಹನಗಳ ದಾರಿಯಲ್ಲಿ ಅಡ್ಡಡ್ಡ ಮಲಗಿ ಚಿನ್ನಾಟವಾಡಿದ ಸಿಂಹಗಳು
ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮತಾಂತರ ಮಸೂದೆ ಮಂಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಮಧ್ಯಾಹ್ನದ ನಂತರ ವಿಧಾನಸಭೆಯಲ್ಲಿ ಮಸೂದೆ ಮಂಡನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಒಂದೊಮ್ಮೆ ವಿಧೇಯಕ ಮಂಡನೆಯಾದರೆ ಕಲಾಪದಲ್ಲಿ ಗದ್ದಲ-ಕೋಲಾಹಲ ನಡೆಯುವ ಸಾಧ್ಯತೆ ದಟ್ಟವಾಗಿದೆ.