alex Certify ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ರಾ ಹೆಚ್.ವಿಶ್ವನಾಥ್……? ಕುತೂಹಲ ಮೂಡಿದ AICC ಅಧ್ಯಕ್ಷರ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ರಾ ಹೆಚ್.ವಿಶ್ವನಾಥ್……? ಕುತೂಹಲ ಮೂಡಿದ AICC ಅಧ್ಯಕ್ಷರ ಭೇಟಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಮತ್ತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೆಚ್.ವಿಶ್ವನಾಥ್ ಭೇಟಿಯಾಗಿ ಮಾತುಕತೆ ನಡೆಸಿರುವುದು ಈ ಬೆಳವಣಿಗೆಗೆ ಇನ್ನಷ್ಟು ಪುಷ್ಟಿ ನೀಡುವಂತಿದೆ. ಸದ್ದಿಲ್ಲದೇ ವಿಶ್ವನಾಥ್ ದೆಹಲಿಯಲ್ಲಿ ಖರ್ಗೆ ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಈ ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರಿ ಮೈತ್ರಿ ಸರ್ಕಾರ ಪತನದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಬಿಜೆಪಿ ಸೇರಿದ್ದ ಹೆಚ್.ವಿಶ್ವನಾಥ್ ಹುಣಸೂರು ಉಪಚುನಾವಣೆಯಲ್ಲಿ ಸೋಲನುಭವಿಸಿದ್ದರೂ ಅವರನ್ನು ಸಮಾಧಾನಪಡಿಸಲು ಬಿಜೆಪಿ ಪರಿಷತ್ ಸದಸ್ಯ ಸ್ಥಾನ ನೀಡಿತ್ತು. ಆದಾಗ್ಯೂ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತ, ಟೀಕಿಸುತ್ತಲೇ ಇದ್ದ ವಿಶ್ವನಾಥ್ ಕಾಂಗ್ರೆಸ್ ಕಡೆಗೆ ಮತ್ತೆ ಒಲವು ಹೊಂದಿದ್ದಾರೆ ಎನ್ನಲಾಗಿತ್ತು. ಇದೀಗ ಏಕಾಏಕಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...