ಬೆಂಗಳೂರು: ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಶಾಸಕ ಜಮೀರ್ ಅಹ್ಮದ್ ಅವರ ಹೇಳಿಕೆ ಬೆನ್ನಲ್ಲೇ ಜಮೀರ್ ವಿರುದ್ಧ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಇಬ್ಬರು ನಾಯಕರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ರಾಜಕೀಯ ಚರ್ಚೆ ಕೂಡ ಆರಂಭವಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಜಮೀರ್ ಅಹ್ಮದ್ ಮತ್ತೆ ಡಿ.ಕೆ. ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಇಡಿ ದಾಳಿ ಪ್ರಕರಣ ರಾಜಕೀಯ ಪ್ರೇರಿತ ಎಂದು ಹೇಳಿಕೆ ನೀಡಿದ್ದ ಡಿ.ಕೆ. ಶಿವಕುಮಾರ್, ಆಗಸ್ಟ್ 9ರಂದು ಜಮೀರ್ ನಿವಾಸಕ್ಕೆ ತೆರಳಿ ಧೈರ್ಯ ತುಂಬಿದ್ದರು. ಈ ಮೂಲಕ ಹೊಸ ಸಂದೇಶ ರವಾನಿಸಿದ್ದರು.
ದೇವಾಲಯದಲ್ಲೇ ಅರ್ಚಕನಿಂದ ಆಘಾತಕಾರಿ ಕೃತ್ಯ: ದೇವರ ದರ್ಶನಕ್ಕೆ ಬಂದ ಮಹಿಳೆ ಮೇಲೆ ಅತ್ಯಾಚಾರ
ಇದೀಗ ಜಮೀರ್ ಅಹ್ಮದ್ ಮತ್ತೆ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಗಳನ್ನು ಇಮ್ಮಡಿಗೊಳಿಸಿದೆ.