ಭಾರತದ ಅತಿ ಸಿರಿವಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಈಗ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮತ್ತೆ ಟಾಪ್ 10 ಸ್ಥಾನಕ್ಕೆ ಮರಳಿದ್ದಾರೆ.
ಒಟ್ಟು 83.3 ಶತಕೋಟಿ ಡಾಲರ್ (6.83 ಲಕ್ಷ ಕೋಟಿ ರೂಪಾಯಿ) ನಿವ್ವಳ ಆಸ್ತಿ ಮೌಲ್ಯದೊಂದಿಗೆ ಮುಕೇಶ್ ಅಂಬಾನಿ ವಿಶ್ವ ಸಿರಿವಂತರ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದಾರೆ.
ಒಂದು ಸಂದರ್ಭದಲ್ಲಿ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿದ್ದ ಅದಾನಿ ಸಮೂಹದ ಗೌತಮ್ ಅದಾನಿ ಆಸ್ತಿ ಮೌಲ್ಯದಲ್ಲಿ ಗಣನೀಯ ಇಳಿಕೆ ಕಂಡಿದ್ದು, ವಿಶ್ವ ಸಿರಿವಂತರ ಪಟ್ಟಿಯಲ್ಲಿ ಅವರು 24ನೇ ಸ್ಥಾನದಲ್ಲಿದ್ದಾರೆ.