ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರಲ್ಲೂ ಸೋಂಕು ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜಿಗೆ ಮತ್ತೆ ರಜೆ ನೀಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2021-22ರ ಶೈಕ್ಷಣಿಕ ವರ್ಷವನ್ನು ಫೆಬ್ರವರಿ 10ರೊಳಗೆ ಮುಗಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ರಾಜ್ಯದಲ್ಲಿ ಈಗಾಗಲೇ ಕೆಲ ಶಾಲೆಗಳು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ರಜೆ ನೀಡಿದ್ದಾರೆ. ಇದರ ಬೆನ್ನಲ್ಲೇ ಶಾಲೆಗಳಿಗೆ ರಜೆ ನೀಡುವ ವಿಚಾರ ಆಯಾ ಶಿಕ್ಷಣ ಸಂಸ್ಥೆಗಳಿಗೆ ಬಿಟ್ಟಿದ್ದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈಗಾಗಲೇ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಅಧಿಕಾರಿಗಳ ಮಟ್ಟದಲ್ಲಿ ಮಾತ್ರ ಶೈಕ್ಷಣಿಕ ವರ್ಷ ಮುಗಿಸುವ ಬಗ್ಗೆ ಚರ್ಚೆ ನಡೆದಿದ್ದು, ಒಂದೆರಡು ದಿನಗಳಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.