
ಹೌದು, ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಕಾಂತಾರಾ ಮತ್ತೊಂದು ದಾಖಲೆಯನ್ನು ಮುಡಿಗೇರಿಸಿಕೊಂಡಿದೆ. ಈ ಮಾಹಿತಿಯನ್ನು ಸ್ವತಃ ಹೊಂಬಾಳೆ ಸಂಸ್ಥೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಈವರೆಗೆ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆ. ಇನ್ನಷ್ಟು ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿ ಕಾಂತಾರ..! ನಿಮ್ಮ ಪ್ರೋತ್ಸಾಹಕ್ಕೆ ನಾವು ಸದಾ ಋಣಿ.. ಧನ್ಯವಾದ ಕರ್ನಾಟಕ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.
ಕರ್ನಾಟಕದಲ್ಲಿ 25 ದಿನಗಳಲ್ಲಿ 77 ಲಕ್ಷ ಮಂದಿ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ. ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ. ಕನ್ನಡದ ದೊಡ್ಡ ಚಿತ್ರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಂಸ್ಥೆಗೆ ಕೆಜಿಎಫ್ 2 ಬಳಿಕ ಇನ್ನೊಂದು ಭಾರಿ ಯಶಸ್ಸು ನೀಡಿರುವ ಚಿತ್ರ ಇದಾಗಿದೆ ಅಂದರೆ ತಪ್ಪಾಗಲ್ಲ. ದೇಶ ವಿದೇಶಗಳಲ್ಲೂ ಕರ್ನಾಟಕ ಮಣ್ಣಿನ ಘಮ ಪಸರಿಸುತ್ತಿದೆ ಕಾಂತಾರಾ.