alex Certify ಮತ್ತೊಂದು ದಾಖಲೆ ತನ್ನದಾಗಿಸಿಕೊಂಡ ಕಾಂತಾರ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ದಾಖಲೆ ತನ್ನದಾಗಿಸಿಕೊಂಡ ಕಾಂತಾರ….!

ಸೆಪ್ಟೆಂಬರ್ 30 ರಂದು ಬಿಡುಗಡೆಯಾಗಿದ್ದ ರಿಷಬ್ ಶೆಟ್ಟಿ ನಿರ್ದೇಶನ ಮತ್ತ ನಟನೆಯ ಕಾಂತಾರ ಚಿತ್ರದ ನಾಗಾಲೋಟ ವಿಶ್ವದೆಲ್ಲೆಡೆ ಮುಂದುವರಿದಿದ್ದು, ಒಂದಾದ ಮೇಲೊಂದು ಹೊಸ ದಾಖಲೆಗಳನ್ನು ಬರೆಯುತ್ತಾ ಇನ್ನಷ್ಟು ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿದೆ. ಚಿತ್ರ ವೀಕ್ಷಣೆಯ ಪ್ರೇಕ್ಷರನ್ನು ಹೊಸ ಲೋಕಕ್ಕೆ ಕೊಂಡೊಯ್ಯುತ್ತಿದೆ ಕಾಂತಾರ. ಇದೀಗ ಮತ್ತೊಂದು ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಹೌದು, ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಕಾಂತಾರಾ ಮತ್ತೊಂದು ದಾಖಲೆಯನ್ನು ಮುಡಿಗೇರಿಸಿಕೊಂಡಿದೆ. ಈ ಮಾಹಿತಿಯನ್ನು ಸ್ವತಃ ಹೊಂಬಾಳೆ ಸಂಸ್ಥೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಈವರೆಗೆ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆ. ಇನ್ನಷ್ಟು ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿ ಕಾಂತಾರ..! ನಿಮ್ಮ ಪ್ರೋತ್ಸಾಹಕ್ಕೆ ನಾವು ಸದಾ ಋಣಿ.. ಧನ್ಯವಾದ ಕರ್ನಾಟಕ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಕರ್ನಾಟಕದಲ್ಲಿ 25 ದಿನಗಳಲ್ಲಿ 77 ಲಕ್ಷ ಮಂದಿ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ. ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ. ಕನ್ನಡದ ದೊಡ್ಡ ಚಿತ್ರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಂಸ್ಥೆಗೆ ಕೆಜಿಎಫ್ 2 ಬಳಿಕ ಇನ್ನೊಂದು ಭಾರಿ ಯಶಸ್ಸು ನೀಡಿರುವ ಚಿತ್ರ ಇದಾಗಿದೆ ಅಂದರೆ ತಪ್ಪಾಗಲ್ಲ. ದೇಶ ವಿದೇಶಗಳಲ್ಲೂ ಕರ್ನಾಟಕ ಮಣ್ಣಿನ ಘಮ ಪಸರಿಸುತ್ತಿದೆ ಕಾಂತಾರಾ.

— Hombale Films (@hombalefilms) October 24, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...