alex Certify ಮತ್ತೊಂದು ದಾಖಲೆ ಮುರಿಯಲು ಸಜ್ಜಾಗಿದೆ ಕಾಂತಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ದಾಖಲೆ ಮುರಿಯಲು ಸಜ್ಜಾಗಿದೆ ಕಾಂತಾರ

ರಿಷಬ್ ಶೆಟ್ಟಿ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಕಾಂತಾರ’ ಸಿನಿಮಾ ಭಾರತದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಸುಕುಮಾರ್ ಹಾಗೂ ಸ್ಟೈಲಿಶ್* ಅಲ್ಲು ಅರ್ಜುನ್ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಪುಷ್ಪಾ ದಿ ರೈಸ್’ ಚಿತ್ರ ಕಳೆದ ವರ್ಷ ತೆಲುಗು ಸೇರಿದಂತೆ 5 ಭಾಷೆಯಲ್ಲಿ ಬಿಡುಗಡೆಯಾಗಿ ಸುಮಾರು 365 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಇದೀಗ ಕಾಂತಾರ ಸಿನಿಮಾ 324 ಕೋಟಿ ರೂಪಾಯಿ ಗಳಿಕೆ ಮಾಡಿದ್ದು ಪುಷ್ಪಾ  ಚಿತ್ರವನ್ನು ಹಿಂದಿಕ್ಕುವ ಲೆಕ್ಕಾಚಾರದಲ್ಲಿದೆ.

ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕೇವಲ 16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾ ಸಾಕಷ್ಟು ಜನಪ್ರಿಯತೆ ಪಡೆದಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಗೆ ಜೋಡಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದು, ಅಚ್ಯುತ್ ಕುಮಾರ್, ಕಿಶೋರ್, ನವೀನ್, ಪ್ರಮೋದ್ ಶೆಟ್ಟಿ, ಮಾನಸಿ ಸುಧೀರ್, ದೀಪಕ್ ರೈ ಪಣಾಜೆ, ಚಂದ್ರಕಲಾ ರಾವ್, ರಾಜೀವ್ ಶೆಟ್ಟಿ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...