ಬೀದರ್: ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಇಮ್ಮಡಿಗೊಳ್ಳುತ್ತಿದ್ದು, ವಸತಿ ಶಾಲೆಗಳು ಕೋವಿಡ್ ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿವೆ. ಕಿತ್ತೂರು ರಾಣಿ ಚನ್ನಮ್ಮ ಮೆಟ್ರಿಕ್ ನಂತರದ ವಸತಿ ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ 5 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮಕ್ಕಳ ಸಂಪರ್ಕದಲ್ಲಿದ್ದ 140 ಮಕ್ಕಳನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ವೇಳೆ 16 ಮಕ್ಕಳಿಗೆ ಸೋಂಕು ದೃಢಪಟ್ಟಿದೆ.
ಕೆಲ ಮಕ್ಕಳನ್ನು ವಸತಿ ಶಾಲೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು, ಇನ್ನು ಕೆಲ ಮಕ್ಕಳನ್ನು ಮನೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲೆಯಾದ್ಯಂತ ಕೋವಿಡ್ ಭೀತಿ ಎದುರಾಗಿದೆ.