ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಮತ್ತೊಂದು ವಿಷ ಅನಿಲ ಸೋರಿಕೆ ದುರಂತ ನಡೆದಿದೆ. ವಿಷಾನಿಲ ಸೋರಿಕೆಯಾಗಿ 30 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ವಿಶಾಖಪಟ್ಟಣಂ ನಲ್ಲಿ ನಡೆದಿದೆ.
ವಿಶಾಖಪಟ್ಟಣಂ ನ ಪೋರಸ್ ಲ್ಯಾಬೊರೇಟರೀಸ್ ಪ್ರೈವೆಟ್ ಲಿಮಿಟೆಡ್ ನಲ್ಲಿ ಈ ಘಟನೆ ನಡೆದಿದೆ. ವಿಷ ಅನಿಲ ಸೋರಿಕೆಯಿಂದ 30 ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅಸ್ವಸ್ಥ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.