alex Certify ಮತ್ತೊಂದು ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ; ಮೇ 13ರಂದು ಮುಹೂರ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ; ಮೇ 13ರಂದು ಮುಹೂರ್ತ

ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸಲು ಮುಂದಾಗಿದ್ದು, ಇದು ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

‘ಅಜಾಗ್ರತಾ’ ಎಂದು ಹೆಸರಿಡಲಾಗಿರುವ ಈ ಸಿನಿಮಾದ ಮುಹೂರ್ತ ಮೇ 13 ರಂದು ಹೈದರಾಬಾದಿನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದ್ದು, ಯುವ ನಿರ್ದೇಶಕ ಶಶಿಧರ್ ನಿರ್ದೇಶಿಸುತ್ತಿದ್ದಾರೆ.

ಸೈಕಲಾಜಿಕಲ್ ಕ್ರೈಂ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ‘ಅಜಾಗ್ರತ’ ದಲ್ಲಿ ರಾಧಿಕಾ ಕುಮಾರಸ್ವಾಮಿಯವರೊಂದಿಗೆ ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ವಿನಯಾ ಪ್ರಸಾದ್, ಚಿತ್ರಾ ಶೆಣೈ ಮೊದಲಾದವರು ನಟಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...