alex Certify ಮತ್ತೊಂದು ಹೋರಾಟಕ್ಕೆ ರೆಡಿಯಾದ ಪಂಚಮಸಾಲಿ ಸಮುದಾಯ; ಇಂದಿನಿಂದ ಸತ್ಯಾಗ್ರಹ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಹೋರಾಟಕ್ಕೆ ರೆಡಿಯಾದ ಪಂಚಮಸಾಲಿ ಸಮುದಾಯ; ಇಂದಿನಿಂದ ಸತ್ಯಾಗ್ರಹ ಆರಂಭ

ಬೆಂಗಳೂರು: 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಇದಿನಿಂದ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ ಆರಂಭಿಸಿದ್ದು, ಬೇಡಿಕೆ ಈಡೇರಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇಂದಿನಿಂದ ಮಾರ್ಚ್ 4ರವರೆಗೂ ಫ್ರೀಡಂ ಪಾರ್ಕ್ ನಲ್ಲಿ ಪಂಚಮಸಾಲಿಗಳ ಸತ್ಯಾಗ್ರಹ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಧರಣಿ ನಡೆಯಲಿದೆ. ಸತ್ಯಾಗ್ರಹದಲ್ಲಿ ಸಚಿವರು, ಶಾಸಕರು ಕೂಡ ಭಾಗವಹಿಸುವ ನಿರೀಕ್ಷೆಯಿದೆ.

ಏಪ್ರಿಲ್ 1 ರಿಂದ ಜಾರಿಯಾಗುವ PF ತೆರಿಗೆ ನೀತಿಯ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ಈ ಕುರಿತು ಮಾತನಾಡಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮೀಸಲಾತಿಗಾಗಿ ಆಗ್ರಹಿಸಿ ಕಳೆದ 38 ದಿನಗಳಿಂದ ಪಾದಯಾತ್ರೆ ನಡೆಸಿದ್ದೇವೆ. ಹೋರಾಟದಲ್ಲಿ ಸಾವಿರಾರು ಜನರು ಭಾಗಿಯಾಗಿದ್ದಾರೆ. ಸರ್ಕಾರಕ್ಕೆ ಗಡುವು ನೀಡಿದರೂ ನಮ್ಮ ಬೇಡಿಕೆ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಹೀಗಾಗಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದು, ಇಂದಿನಿಂದ ಸತ್ಯಾಗ್ರಹ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...