alex Certify ಮತ್ತೊಮ್ಮೆ ಏಷ್ಯಾದ ‘ನಂಬರ್ 1’ ಶ್ರೀಮಂತರಾಗಿ ಹೊರಹೊಮ್ಮಿದ ಮುಕೇಶ್ ಅಂಬಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಮ್ಮೆ ಏಷ್ಯಾದ ‘ನಂಬರ್ 1’ ಶ್ರೀಮಂತರಾಗಿ ಹೊರಹೊಮ್ಮಿದ ಮುಕೇಶ್ ಅಂಬಾನಿ

ಭಾರತದ ಅತಿ ಸಿರಿವಂತ ಎಂಬ ಹೆಗ್ಗಳಿಕೆ ಹೊಂದಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಏಷ್ಯಾದ ನಂಬರ್ 1 ಶ್ರೀಮಂತ ಎಂಬ ಪಟ್ಟ ಅಲಂಕರಿಸಿದ್ದಾರೆ. ಫೋರ್ಬ್ಸ್ ಮ್ಯಾಗಝೀನ್ ಮಂಗಳವಾರದಂದು ಬಿಡುಗಡೆ ಮಾಡಿದ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಈ ಮಾಹಿತಿ ನೀಡಲಾಗಿದೆ.

ಮುಕೇಶ್ ಅಂಬಾನಿ 6.83 ಲಕ್ಷ ಕೋಟಿ ರೂಪಾಯಿ ಆಸ್ತಿ ಹೊಂದಿದ್ದು, ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಅದಾನಿ ಸಮೂಹ ಸಂಸ್ಥೆಗಳ ಮಾಲೀಕ ಗೌತಮ್ ಅದಾನಿ ಈಗ 24ನೇ ಸ್ಥಾನಕ್ಕೆ ಕುಸಿದಿದ್ದಾರೆ. ಗೌತಮ್ ಅದಾನಿ ಅವರ ಆಸ್ತಿ ಮೌಲ್ಯ 3.87 ಲಕ್ಷ ಕೋಟಿ ರೂಪಾಯಿಗಳಾಗಿದೆ.

ಇನ್ನು ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಮೊದಲ ಸ್ಥಾನದಲ್ಲಿದ್ದು, ಗೌತಮ್ ಅದಾನಿ ಎರಡನೇ ಸ್ಥಾನದಲ್ಲಿದ್ದಾರೆ. 2 ಲಕ್ಷ ಕೋಟಿ ರೂಪಾಯಿ ಆಸ್ತಿ ಮೌಲ್ಯದೊಂದಿಗೆ ಶಿವನಾಡರ್ ಮೂರನೇ ಹಾಗೂ 1.8 ಲಕ್ಷ ಕೋಟಿ ರೂಪಾಯಿ ಆಸ್ತಿಯೊಂದಿಗೆ ಸೈರಸ್ ಪೂನಾವಾಲ ನಾಲ್ಕನೇ ಸ್ಥಾನದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...