
ಇದೀಗ ತಮ್ಮ ಸಾಮಾಜಿಕ ಕಾರ್ಯಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಪಂಜಾಬ್ನಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲು ಸಹಾಯ ಮಾಡಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಪಡೆಯಲು ಸಹಾಯ ಕೂಡ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಸೋನು ಸೂದ್ರ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.
ಟ್ವಿಟರ್ನಲ್ಲಿ ಶೇರ್ ಮಾಡಲಾಗುತ್ತಿರುವ ವಿಡಿಯೋದಲ್ಲಿ ಗಾಯಗೊಂಡಿದ್ದ ಯುವಕನನ್ನು ಸೋನು ಸೂದ್ ಆಸ್ಪತ್ರೆಗೆ ಎತ್ತಿಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ.
ಆಸ್ಪತ್ರೆಯಲ್ಲಿ ಯುವಕನಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು ಆತ ಆರೋಗ್ಯವಾಗಿದ್ದಾನೆ ಎನ್ನಲಾಗಿದೆ. ಸೋನು ಸೂದ್ ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿಯೂ ಕೋವಿಡ್ 19 ವಿರುದ್ಧ ಹೋರಾಡುತ್ತಿದ್ದ ದೇಶದ ಜನತೆಗೆ ಅನೇಕ ರೀತಿಯಲ್ಲಿ ಸಹಾಯ ಮಾಡಿದ್ದರು.