ಮಂಡ್ಯ: ಶಾಸಕ ಸಿ.ಎಸ್. ಪುಟ್ಟರಾಜು ಅವರ ಪಾಂಡವಪುರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜುಗಳು ಸಂಪೂರ್ಣ ಪುಡಿಪುಡಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಪಾಂಡವಪುರ ಶಾಸಕ ಪುಟ್ಟರಾಜು ಅವರ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದ್ದು, ಮನೆ ಮುಂದೆ ನಿಂತಿದ್ದ 8 ಕಾರುಗಳ ಗಾಜನ್ನೂ ಪುಡಿ ಪುಡಿ ಮಾಡಿ ಅಟ್ಟಹಾಸ ಮೆರೆದಿದ್ದಾರೆ.
ಮೂತ್ರ ವಿಸರ್ಜಿಸುತ್ತಿರುವಾಗಲೇ ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡ ಭೂಪ…!
ಅಲ್ಲದೇ ಖಾಸಗಿ ಬಸ್ ಹಾಗೂ ಶೋ ರೂಮ್ ಮೇಲೂ ದಾಳಿ ನಡೆದಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕರು, ಯಾರೋ ಹುಡುಗರು ಈ ಕೃತ್ಯವೆಸಗಿದ್ದಾರೆ. ಈಗಾಗಲೇ ಹುಡುಗರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.