alex Certify ಮಥುರಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ ಕಂಗನಾ ? ಪ್ರಶ್ನೆ ಕೇಳುತ್ತಿದ್ದಂತೆ ಸಿಡಿಮಿಡಿಗೊಂಡ ಹೇಮಮಾಲಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಥುರಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ ಕಂಗನಾ ? ಪ್ರಶ್ನೆ ಕೇಳುತ್ತಿದ್ದಂತೆ ಸಿಡಿಮಿಡಿಗೊಂಡ ಹೇಮಮಾಲಿನಿ

ಮಥುರಾ ಲೋಕಸಭಾ ಕ್ಷೇತ್ರವನ್ನು ಬಾಲಿವುಡ್ ನಟಿ ಹೇಮಾ ಮಾಲಿನಿ ಪ್ರತಿನಿಧಿಸುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಅವರ ಕೈ ತಪ್ಪಲಿದೆ ಹಾಗೂ ಅಲ್ಲಿಂದ ನಟಿ ಕಂಗನಾ ರಣಾವತ್ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದಕ್ಕೆ ಪುಷ್ಟಿ ನೀಡುವಂತೆ ಇತ್ತೀಚೆಗಷ್ಟೇ ಕಂಗನಾ ರಣಾವತ್ ತಮ್ಮ ಕುಟುಂಬಸ್ಥರೊಂದಿಗೆ ಮಥುರಾಕ್ಕೆ ಭೇಟಿ ನೀಡಿ ಅಲ್ಲಿನ ಪ್ರಸಿದ್ಧ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು. ಅಲ್ಲದೆ ಕೆಲ ತಿಂಗಳುಗಳಿಂದ ಅವರು ಮಥುರಾಕ್ಕೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ.

ಇದರ ಮಧ್ಯೆ ಮಾಧ್ಯಮ ಪ್ರತಿನಿಧಿಗಳು ಸಂಸದೆ ಹೇಮಾ ಮಾಲಿನಿ ಅವರಿಗೆ, ಮಥುರಾ ಲೋಕಸಭಾ ಕ್ಷೇತ್ರದಿಂದ ಕಂಗನಾ ಸ್ಪರ್ಧೆ ಕುರಿತಂತೆ ಪ್ರಶ್ನಿಸಿದಾಗ ಅವರು ಸಿಡಿಮಿಡಿಗೊಂಡಿದ್ದಾರೆ. ಮಥುರಾದಿಂದ ಕಂಗನಾ ಆದರೂ ಸ್ಪರ್ಧಿಸಲಿ ಅಥವಾ ರಾಖಿ ಸಾವಂತ್ ಸಹ ಕಣಕ್ಕಿಳಿಯಲಿ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...