
ಪ್ರವೀಣ್ ತಂದೆ ತೋಟಗಾರಿಕೆ ಇಲಾಖೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಆಗಿ ನಿವೃತ್ತರಾಗಿದ್ದಾರೆ ಎಂದು ಹೇಳಲಾಗಿದ್ದು, ಇದನ್ನು ಸಹ ಪತ್ರದಲ್ಲಿ ನಮೂದಿಸಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ತಮ್ಮ ಪರಿಚಯವಿರುವ ಇಬ್ಬರು ಗಣ್ಯ ವ್ಯಕ್ತಿಗಳ ಹೆಸರನ್ನು ಸಹ ಪತ್ರದಲ್ಲಿ ತಿಳಿಸಲಾಗಿದೆ. ಜೊತೆಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಲಾಗಿದೆ.
ಮತ್ತೊಂದು ಇಂಟರೆಸ್ಟಿಂಗ್ ಸಂಗತಿ ಎಂದರೆ ಪೊಲೀಸ್ ಇಲಾಖೆಯ ಸಿಬ್ಬಂದಿ ಈ ಅರ್ಜಿಯನ್ನು ಸ್ವೀಕರಿಸಿ ಅದಕ್ಕೆ ಇನ್ವಾರ್ಡ್ ನಂಬರ್ ಸಹ ಹಾಕಿದ್ದಾರೆ. ಈ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಆತನಿಗೆ ಹುಡುಗಿ ಹುಡುಕಿ ಕೊಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಆದರೆ ಈ ಅರ್ಜಿಯನ್ನು ಬಹಿರಂಗಪಡಿಸಿದ ಸಿಬ್ಬಂದಿ ಮಾತ್ರ ಶಿಸ್ತು ಕ್ರಮಕ್ಕೆ ಒಳಗಾಗಬಹುದು ಎಂದು ಹೇಳಲಾಗುತ್ತಿದೆ.