alex Certify ಮದುವೆ ನಿಶ್ಚಯವಾಗಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ನಿಶ್ಚಯವಾಗಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಸಾವು..!

ಹಾಸನ: ಆಕೆ ಇನ್ನು 16 ವರ್ಷದ ಅಪ್ರಾಪ್ತ ಬಾಲಕಿ. ಆಕೆಯ ಪೋಷಕರು ಬಾಲಕಿ ಅನ್ನೋದು ಗೊತ್ತಿದ್ದರೂ ಮದುವೆ ನಿಶ್ಚಯ ಮಾಡಿದ್ದರು. ಮದುವೆ ನಿಶ್ಚಯ ಆಗಿ ಎರಡು ತಿಂಗಳು ಮಾತ್ರ ಕಳೆದಿತ್ತು. ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ಜಾತ್ರೆಗೆ ಅಂತ ಅಪ್ರಾಪ್ತೆ ಹೋಗಿದ್ದಾಳೆ. ಈ ವೇಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಹೌದು, ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಕೂಡ್ಲೂರು ಗ್ರಾಮದ ದಿನೇಶ್ ಜೊತೆ ಎರಡು ತಿಂಗಳ ಹಿಂದೆ ಬಾಲಕಿಗೆ ಮದುವೆ ನಿಶ್ಚಯವಾಗಿತ್ತು. ಈ ವೇಳೆ ದಿನೇಶ್ ನವೆಂಬರ್ 29 ರ ರಾಮನಾಥಪುರ ಷಷ್ಠಿ ಜಾತ್ರೆಗೆಂದು ಕರೆದೊಯ್ದಿದ್ದ. ಸೋಮವಾರ ಮಧ್ಯಾಹ್ನ 2-30 ಕ್ಕೆ ಕರೆದೊಯ್ದ ದಿನೇಶ್, ಸುಮಾರು ನಾಲ್ಕು ಗಂಟೆ ವೇಳೆಗೆ ಅವಳ ಪೋಷಕರಿಗೆ ಕರೆ ಮಾಡಿ ನಿಮ್ಮ ಮಗಳು ವಿಷ ಕುಡಿದಿದ್ದಾಳೆಂದು ಹೇಳಿದ್ದಾನೆ.

ಜೊತೆಗೆ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿರೋದಾಗಿ ಹೇಳಿದ್ದಾರೆ. ಆದರೆ ಆಸ್ಪತ್ರೆಗೆ ದಾಖಲಾಗೋ ವೇಳೆಗೆ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದಾಳೆ. ಮತ್ತೊಂದು ವಿಚಾರ ಅಂದರೆ, ತಾನೂ ವಿಷ ಸೇವನೆ ಮಾಡಿದ್ದಾನೆ ದಿನೇಶ್. ದಿನೇಶ್ ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿ ಮೃತದೇಹದ ಮೇಲೆ ಗಾಯದ ಗುರುತು, ಕುತ್ತಿಗೆಯಲ್ಲಿ ಪೆಟ್ಟಾಗಿರೊ ಗಾಯದ ಗುರುತು ಪತ್ತೆಯಾಗಿದೆ. ಗಾಯದ ಗುರುತು ಇರೋ ಹಿನ್ನೆಲೆಯಲ್ಲಿ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಂದ ಘಟನೆ ಬಗ್ಗೆ ತನಿಖೆ ನಡೆಸುವಂತೆ ಎಸ್ಪಿಗೆ ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...