alex Certify ಮದುವೆ ಮಾಡು ಎಂದ ಮಗನಿಗೆ ಚಾಕು ಹಾಕಿದ ತಂದೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಮಾಡು ಎಂದ ಮಗನಿಗೆ ಚಾಕು ಹಾಕಿದ ತಂದೆ….!

ಚೆನ್ನೈ : ಮಗನೊಬ್ಬ ತನ್ನ ತಂದೆಗೆ ಮದುವೆ ಮಾಡು ಎಂದು ಕೇಳಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ತಮಿಳುನಾಡಿನಿಂದ ವರದಿಯಾಗಿದ್ದು, ಮದುವೆ ವಿಚಾರವಾಗಿ ತಂದೆ ಹಾಗೂ ಮಗನ ಮಧ್ಯೆ ಜೋರಾಗಿ ಜಗಳ ನಡೆದಿದೆ. ಈ ಸಂದರ್ಭದಲ್ಲಿ ಇಬ್ಬರೂ ಮದ್ಯ ಸೇವಿಸಿದ್ದರು ಎನ್ನಲಾಗಿದೆ.

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿದ ಕಿಡಂಬಿ ಶ್ರೀಕಾಂತ್‌

ಜಗಳ ವಿಕೋಪಕ್ಕೆ ತೆರಳಿ ಕೊಲೆಯಲ್ಲಿ ಅಂತ್ಯವಾಗಿದೆ.

ಶಿವಮಣಿ(30) ಎಂಬ ಯುವಕ ತಂದೆಯಿಂದಲೇ ಕೊಲೆಯಾದ ದುರ್ದೈವಿ. ಕೊಲೆಯಾದ ಯುವಕನಿಗೆ ಇಬ್ಬರು ಸಹೋದರಿಯರಿದ್ದರು. ಅವರಿಬ್ಬರನ್ನೂ ಮದುವೆ ಮಾಡಿ ಗಂಡನ ಮನೆಗೆ ಕಳುಹಿಸಲಾಗಿತ್ತು. ಹೀಗಾಗಿ ನನಗೂ ಮದುವೆ ಮಾಡು ಎಂದು ಮಗ ತಂದೆಗೆ ಕೇಳಿದ್ದಾನೆ. ಆಗ ಜಗಳ ಆರಂಭವಾಗಿ ತಂದೆ, ಮಗನನ್ನು ಚಾಕುವಿನಿಂದ ಇರಿದಿದ್ದಾನೆ. ಮಗ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆಯ ನಂತರ ತಂದೆ ತಲೆ ಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...