alex Certify ಮದ್ಯದ ಅಮಲಿನಲ್ಲಿ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿನಿ – ವಿದ್ಯಾರ್ಥಿಗಳು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದ ಅಮಲಿನಲ್ಲಿ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿನಿ – ವಿದ್ಯಾರ್ಥಿಗಳು…!

ಮದ್ಯದ ಅಮಲಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆ ಉಡುಪಿಯ ಪಡುಬಿದ್ರೆ ಪೇಟೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳ ಗಲಾಟೆ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಅವರುಗಳನ್ನು ವಶಕ್ಕೆ ಪಡೆದು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಲಾಗಿದೆ.

ಒಂದೇ ಸ್ಕೂಟರ್ ರಲ್ಲಿ ಓರ್ವ ವಿದ್ಯಾರ್ಥಿನಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಬರುತ್ತಿದ್ದು ಮಾರ್ಗ ಮಧ್ಯದಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪರಸ್ಪರ ವಾಗ್ವಾದದಲ್ಲಿ ತೊಡಗಿದ್ದ ಅವರುಗಳು ಬಳಿಕ ಹೊಡೆದಾಟವನ್ನೂ ಮಾಡಿಕೊಂಡಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಬಿಡಿಸಲು ಮುಂದಾದರೂ ಸಾಧ್ಯವಾಗಿಲ್ಲ.

ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದ ಅವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರೊಂದಿಗೂ ವಾಗ್ವಾದಕ್ಕೆ ಮುಂದಾಗಿದ್ದು, ಬಳಿಕ ಅವರುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ಮಾಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...