ಮೈಸೂರು: ಆಂಬುಲೆನ್ಸ್ ಚಾಲಕನ ಬೇಜವಾಬ್ದಾರಿಗೆ ಜೀವವೊಂದು ಬಲಿಯಾಗಿದೆ. ಕುಡಿದ ಮತ್ತಿನಲ್ಲಿ ಆಂಬುಲೆನ್ಸ್ ಚಲಾಯಿಸಿದ್ದು ಅಲ್ಲದೇ ಮಾರ್ಗ ಮಧ್ಯೆಯೇ ಆಂಬುಲೆನ್ಸ್ ನಿಲ್ಲಿಸಿ ನಿರ್ಲಕ್ಷ ಮೆರೆದ ಪರಿಣಾಮ ರೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
30 ವರ್ಷದ ತೀರ್ಥಾನಂದ ಮೃತ ವ್ಯಕ್ತಿ. ಹಾಸನ ಸಿದ್ದಾಪುರ ಗ್ರಾಮದ ನಿವಾಸಿ ತೀರ್ಥಾನಂದ ಅವರಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು.
ಹೆಚ್ಚಿದ ಒಮಿಕ್ರಾನ್ ಸೋಂಕು; 578 ಜನರಲ್ಲಿ ರೂಪಾಂತರಿ ವೈರಸ್ ಪತ್ತೆ
ಈ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ತೀರ್ಥಾನಂದರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾಗ ಆಂಬುಲೆನ್ಸ್ ಚಾಲಕ ಅಲ್ಲಲ್ಲಿ ವಾಹನ ನಿಲ್ಲಿಸುತ್ತಿದ್ದ. ಅಲ್ಲದೇ ಮೈಸೂರಿನ ಹುಣಸೂರು ಬಳಿ ಆಂಬುಲೆನ್ಸ್ ನಿಲ್ಲಿಸಿದ ಚಾಲಕ ಮುಂದೆ ಹೋಗಲು ತನ್ನಿಂದ ಸಾಧ್ಯವೇ ಇಲ್ಲ ಎಂದಿದ್ದ. ಕುಡಿದ ಮತ್ತಿನಲ್ಲಿ ರಂಪಾಟ ನಡೆಸಿದ್ದ. ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತೀರ್ಥಾನಂದ ಸಾವನ್ನಪ್ಪಿದ್ದಾರೆ.
ಆಂಬುಲೆನ್ಸ್ ಚಾಲಕನ ನಿರ್ಲಕ್ಷ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಚಾಲಕನ್ನು ಬಂಧಿಸಿದ್ದಾರೆ.