ಮದ್ಯ ಸೇವಿಸಿ ಶಾಲೆಗೆ ಬಂದ ದೈಹಿಕ ಶಿಕ್ಷಕನಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ತಾಲೂಕಿನ ಕನ್ನೂರು ಬಾಲಕಿಯರ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್. ರಾಥೋಡ್, ಮದ್ಯ ಸೇವಿಸಿ ಶಾಲೆಗೆ ಬಂದಿದ್ದು, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಳಿಕ ಈ ದೈಹಿಕ ಶಿಕ್ಷಕನನ್ನು ಅಮಾನತುಗೊಳಿಸಿ ಇಲ್ಲವೇ ಬೇರೆಡೆ ವರ್ಗಾವಣೆ ಮಾಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.