ಚೀನಾದಲ್ಲಿ ಕೊರೋನಾ ಮತ್ತೆ ಅರ್ಭಟಿಸುತ್ತಿದೆ. ಹೀಗಾಗಿ ಭಾರತದಲ್ಲೂ ಕಳವಳ ಉಂಟಾಗಿದ್ದು, ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಸಲುವಾಗಿ ಕೇಂದ್ರ ಸರ್ಕಾರ ಉನ್ನತ ಅಧಿಕಾರಿಗಳ ಸಭೆ ನಡೆಸಿದೆ. ಅಲ್ಲದೆ ರಾಜ್ಯಗಳಿಗೆ ಕೋವಿಡ್ ಪರೀಕ್ಷೆಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಬುಧವಾರದಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿ.ಕೆ. ಪೌಲ್ ಮಧುಮೇಹಿಗಳಿಗೆ ಮಹತ್ವದ ಸಲಹೆ ನೀಡಿದ್ದಾರೆ.
ಕೋವಿಡ್- 19 ಕುರಿತು ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ ಅವರು, ಮಧುಮೇಹಿಗಳು, ಅಧಿಕ ರಕ್ತದೊತ್ತಡ ಇರುವವರು (ಕೊಮಾರ್ಬಿಡಿಟಿ) ಹಾಗೂ ವಯಸ್ಸಾದವರು ಜನಜಂಗುಳಿ ಇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೂಕ್ತ ಎಂದು ತಿಳಿಸಿದ್ದಾರೆ.