ದೈನಂದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ದುಸ್ತರ ಎಂಬ ಪರಿಸ್ಥಿತಿ ಮಧ್ಯಮ ವರ್ಗದ್ದಾಗಿದ್ದು, ಆದರೆ ಈ ಬಾರಿಯ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭರಪೂರ ಕೊಡುಗೆ ಸಿಗುವ ಸಾಧ್ಯತೆ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರೇ ಸ್ವತಃ ಈ ವಿಷಯ ತಿಳಿಸಿದ್ದಾರೆ.
ಆರ್ ಎಸ್ ಎಸ್ ಪ್ರಕಾಶನ ‘ಪಾಂಚಜನ್ಯ’ ಆಯೋಜಿಸಿದ್ದ ‘ಬಾತ್ ಭಾರತ್ ಕಿ’ ಸಮಾಲೋಚನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿಯ ಕೇಂದ್ರ ಸರ್ಕಾರದ ಬಜೆಟ್ ಅನ್ನು ಮಧ್ಯಮವರ್ಗದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗುತ್ತದೆ ಎಂದಿದ್ದಾರೆ.
ನಾನೂ ಸಹ ಮಧ್ಯಮ ವರ್ಗದ ಹಿನ್ನೆಲೆ ಹೊಂದಿರುವ ಮಹಿಳೆಯಾಗಿದ್ದು, ಹೀಗಾಗಿ ಅವರು ಯಾವ ರೀತಿಯ ಒತ್ತಡದಲ್ಲಿ ಬದುಕುತ್ತಿದ್ದಾರೆ ಎಂಬುದರ ಅರಿವಿದೆ. ಹೀಗಾಗಿ ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಯಾವುದೇ ರೀತಿಯ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಈ ಸಂದರ್ಭದಲ್ಲಿ ನಾನು ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.