ಉತ್ತರಪ್ರದೇಶದ ಕಾನ್ಪುರದಲ್ಲಿ ಏಳು ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಬಾಲಕಿಯನ್ನು ಸೈಕಲ್ ಸವಾರಿ ಆಮಿಷವೊಡ್ಡಿ ಚರಂಡಿಯ ಬಳಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಬಾಲಕಿಯ ಕಿರುಚಾಟ ಕೇಳಿ ಜಾಗೃತರಾದ ಸ್ಥಳೀಯರು ಓಡಿ ಬರುತ್ತಿದ್ದಂತೆ ಬಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಬಳಿಕ ಬಾಲಕಿಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಗಾಯಗೊಂಡ ಸ್ಥಿತಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಪ್ರಾಪ್ತ ಬಾಲಕ ಆಕೆಗೆ ಬ್ಲೇಡ್‌ನಿಂದ ಗಾಯಗೊಳಿಸಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ.