alex Certify ಮನೆಯಲ್ಲೇ ನಕಲಿ ನೋಟು ಮುದ್ರಿಸುತ್ತಿದ್ದ ಭೂಪ ‌ʼಅಂದರ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ನಕಲಿ ನೋಟು ಮುದ್ರಿಸುತ್ತಿದ್ದ ಭೂಪ ‌ʼಅಂದರ್ʼ

ಮನೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ಮಾರುಕಟ್ಟೆಯಲ್ಲಿ ಚಲಾವಣೆ ಮಾಡುತ್ತಿದ್ದ ವ್ಯಕ್ತಿಯನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

4750 ರೂಪಾಯಿ ಮೌಲ್ಯದ ನೋಟುಗಳನ್ನು ವಶಪಡಿಸಿಕೊಂಡಿದ್ದ ಪೊಲೀಸರಿಗೆ ಇದರಲ್ಲಿ ನಕಲಿ ನೋಟುಗಳು ಕಂಡು ಬಂದ ಬಳಿಕ ನಕಲಿ ನೋಟುಗಳ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ನಕಲಿ ನೋಟುಗಳನ್ನು ಮುದ್ರಣ ಮಾಡಲು ಬಳಸುತ್ತಿದ್ದ 2 ರೀಮ್​ ಕೇಸುಗಳು ಹಾಗೂ ಹೆಚ್​ಪಿ ಪ್ರಿಂಟರ್​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ವ್ಯಕ್ತಿಯನ್ನು ಜಾನಕಿ ಯಾದವ್​ ಎಂದು ಗುರುತಿಸಲಾಗಿದೆ. ಈತ ಗೋಂಡಾ ಜಿಲ್ಲೆಯ ನಿವಾಸಿಯಾಗಿದ್ದು ಪ್ರಸ್ತುತ ಸೆಕ್ಟರ್ 53ರ ಗಿಝೋರೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಎನ್ನಲಾಗಿದೆ. ಬಂಧಿತನಿಂದ ಪೊಲೀಸರು ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

— POLICE COMMISSIONERATE GAUTAM BUDDH NAGAR (@noidapolice) March 6, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...