ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಕಟ್ಟಡ, ಒತ್ತುವರಿ ತೆರವು ಕಾರ್ಯಾಚಾರಣೆ ಚುರುಕುಗೊಂಡಿದ್ದು, ಸ್ಥಳೀಯ ನಿವಾಸಿಗಳು ಒತ್ತುವರಿ ತೆರವಿಗೆ ವಿರೋಧಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಮಲ್ಲಿಗೇನಹಳ್ಳಿ ಅಂಬೇಡ್ಕರ್ ಕಾಲೋನಿಯಲ್ಲಿ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗಳಿಗೂ ಬಗ್ಗದ ಅಧಿಕಾರಿಗಳು ಹಲವು ಮನೆಗಳನ್ನು ತೆರವು ಮಾಡಲು ಮುಂದಾಗಿದ್ದಾರೆ. ಈ ವೇಳೆ ವ್ಯಕ್ತಿಯೋರ್ವ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ತಕ್ಷಣ ಪೊಲೀಸರು ಆತನನ್ನು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳೀಯರ ವಿರೋಧದ ನಡುವೆಯೂ ಹಲವು ಒತ್ತುವರಿ ಮನೆಗಳನ್ನು ತೆರವು ಮಾಡಲಾಗಿದ್ದು, ನೀರಾವರಿ ಜಾಗದಲ್ಲಿ ಮನೆ, ಕಟ್ಟಡ ನಿರ್ಮಾಣ ಹಿನ್ನೆಲೆಯಲ್ಲಿ ತೆರವು ಕಾರ್ಯಾಚಾರಣೆ ಕೈಗೊಳ್ಳಲಾಗಿದೆ.