ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಲು ಬಿಬಿಎಂಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೇರ್ ಇಂಡಿಯಾ ಸಹಯೋಗದಲ್ಲಿ 80 ಲಸಿಕಾ ವಾಹನಗಳಿಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಚಾಲನೆ ನೀಡಿದ್ದಾರೆ.
ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಲಸಿಕೆ ನೀಡಲು ಆರೋಗ್ಯ ಸಿಬ್ಬಂದಿಗಳು ಸಿದ್ಧತೆ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಗೌರವ್ ಗುಪ್ತಾ, ಬಿಬಿಎಂಪಿಯು ಕೇರ್ ಇಂಡಿಯಾ ಸಹಯೋಗದಲ್ಲಿ 80 ದ್ವಿಚಕ್ರ ವಾಹನ 16 ಕಾರು ಲಸಿಕೆ ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮನೆ ಹೊಂದುವ ಕನಸು ಕಂಡ ಬಡವರಿಗೆ ಸಿಹಿ ಸುದ್ದಿ: ಪಿಎಂ ಆವಾಸ್ ಯೋಜನೆಯಡಿ 3.6 ಲಕ್ಷ ಮನೆ ನಿರ್ಮಾಣ
ನಗರದಲ್ಲಿ ಕಡಿಮೆ ಲಸಿಕೆಯಾಗಿರುವ ಪ್ರದೇಶಕ್ಕೆ ತೆರಳಿ ಲಸಿಕೆ ನೀಡುವುದು ಇದರ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.