alex Certify ಮನ ಸೆಳೆಯುವ ಪಟ್ಟದಕಲ್ಲಿನ ಶಿಲ್ಪಕಲೆಯ ಸೊಬಗು ಕಂಡಿದ್ದೀರಾ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನ ಸೆಳೆಯುವ ಪಟ್ಟದಕಲ್ಲಿನ ಶಿಲ್ಪಕಲೆಯ ಸೊಬಗು ಕಂಡಿದ್ದೀರಾ…..!

ಹಿಂದೂ ದೇವಸ್ಥಾನಗಳ ಶಿಲ್ಪಕಲೆಯ ಪ್ರಪ್ರಥಮ ಪ್ರಯೋಗಗಳನ್ನು ಪ್ರತಿನಿಧಿಸುವ ದೇವಾಲಯಗಳ ಗುoಪಿಗೆ ಪಟ್ಟದಕಲ್ಲು ಸೇರುತ್ತದೆ. ಇಲ್ಲಿನ ಶಿಲ್ಪಕಲೆಯ ವಿಶಿಷ್ಟತೆ – ದಕ್ಷಿಣ ಭಾರತದ ದ್ರಾವಿಡ ಶೈಲಿ ಹಾಗೂ ಉತ್ತರ ಭಾರತದ ಆರ್ಯ ಶೈಲಿ – ಎರಡನ್ನೂ ಇಲ್ಲಿ ಕಾಣಬಹುದು.

ಪಟ್ಟದಕಲ್ಲು ಕೆಲಕಾಲ ದಕ್ಷಿಣ ಭಾರತದ ಚಾಲುಕ್ಯ ವಂಶದ ರಾಜಧಾನಿಯಾಗಿದ್ದಿತು. ಚಾಲುಕ್ಯ ವಂಶದ ಅರಸರು ಏಳನೇ ಮತ್ತು ಎಂಟನೇ ಶತಮಾನಗಳಲ್ಲಿ ಇಲ್ಲಿ ದೇವಾಲಯಗಳನ್ನು ಕಟ್ಟಿಸಿದರು. ಇಲ್ಲಿ ಒoಬತ್ತು ಮುಖ್ಯ ದೇವಾಲಯಗಳು ಮತ್ತು ಒಂದು ಜೈನ ಬಸದಿ ಇವೆ.

ಎಲ್ಲಕ್ಕಿoತ ಪ್ರಸಿದ್ಧವಾದುದು ಕ್ರಿ.ಶ. ಸುಮಾರು 740 ರಲ್ಲಿ ಮಹಾರಾಣಿ ಲೋಕಮಹಾದೇವಿ ಕಟ್ಟಿಸಿದ ವಿರೂಪಾಕ್ಷ ದೇವಾಲಯ. ಇದನ್ನು 2ನೇ ವಿಕ್ರಮಾದಿತ್ಯನು ಕಂಚಿಯ ಪಲ್ಲವರ ಮೇಲೆ ಸಾಧಿಸಿದ ವಿಜಯದ ನೆನಪಿಗಾಗಿ ಕಟ್ಟಿಸಲಾಯಿತು.

ಇದು ಕಂಚಿಯ ಕೈಲಾಸನಾಥ ದೇವಾಲಯದಂತಿದ್ದು ಅದರ ಸ್ಫೂರ್ತಿಯಿಂದ ಕಟ್ಟಿಸಲಾಗಿದೆ. ಇಲ್ಲಿರುವ ಇತರ ಮುಖ್ಯ ದೇವಾಲಯಗಳೆಂದರೆ ಮಲ್ಲಿಕಾರ್ಜುನ ದೇವಾಲಯ ಹಾಗೂ ಪಾಪನಾಥ ದೇವಸ್ಥಾನ.

ಜಿನಾಲಯದ ಕಲ್ಲಿನ ಆನೆಗಳು ಹಾಗು ಮೇಲ್ಮಹಡಿಗೆ ಹೋಗಲು ಇರುವ ಕಲ್ಲಿನ ಏಣಿಗಳು ಆಕರ್ಷಕವಾಗಿವೆ. ಇಲ್ಲಿರುವ ಸ್ಮಾರಕಗಳ ಗುoಪನ್ನು ಯುನೆಸ್ಕೋ 1987 ರಲ್ಲಿ ವಿಶ್ವ ಪರಂಪರೆಯ ತಾಣ ಎಂದು ಘೋಷಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...