alex Certify ಮಲಯಾಳಂ ಚಿತ್ರರಂಗದ ಹಿರಿಯ ನಟಿ ಅಂಬಿಕಾ ರಾವ್ ಕೊರೊನಾಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಲಯಾಳಂ ಚಿತ್ರರಂಗದ ಹಿರಿಯ ನಟಿ ಅಂಬಿಕಾ ರಾವ್ ಕೊರೊನಾಗೆ ಬಲಿ

ಮಲಯಾಳಂ ಚಿತ್ರರಂಗದ ಹಿರಿಯ ನಟಿ ಅಂಬಿಕಾ ರಾವ್, ಮಾರಕ ಕೊರೊನಾಗೆ ಬಲಿಯಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 58 ವರ್ಷದ ಅಂಬಿಕಾ ರಾವ್ ಕೆಲ ದಿನಗಳ ಹಿಂದಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಅದರಿಂದ ಚೇತರಿಸಿಕೊಂಡಿದ್ದರಾದರೂ ನಂತರದ ಪರಿಣಾಮಗಳಿಂದ ಅಸುನೀಗಿದ್ದಾರೆ.

ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅಂಬಿಕಾ ರಾವ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಲಯಾಳಂ ಚಿತ್ರರಂಗದ ಖ್ಯಾತ ನಟರಾದ ಮೋಹನ್ ಲಾಲ್, ಮುಮ್ಮೂಟ್ಟಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಹಾಯಕ ನಿರ್ದೇಶಕಿಯಾಗಿ ಮಲಯಾಳಂ ಚಿತ್ರರಂಗ ಪ್ರವೇಶಿಸಿದ ಅಂಬಿಕಾ ರಾವ್, ನಂತರ ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದರು. ನಿರ್ದೇಶನದ ಜೊತೆಗೆ ಹಲವು ಚಿತ್ರಗಳಲ್ಲಿಯೂ ಸಹ ಅಂಬಿಕಾ ರಾವ್ ನಟಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...