ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ‘ಯಂಗ್ ಇಂಡಿಯನ್’ ಕಂಪನಿ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಲೋಕಸಭಾ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಚಾರಣೆಗೆ ಕರೆದಿದ್ದು, ಪ್ರತಿ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಸದನದಲ್ಲಿ ಇದನ್ನು ದಾಖಲಿಸಿದ್ದರು.
ಗುರುವಾರದಂದು ಮಲ್ಲಿಕಾರ್ಜುನ ಖರ್ಗೆಯವರು ಇಡಿ ವಿಚಾರಣೆಗೆ ಹಾಜರಾಗಿದ್ದು, ಇದೀಗ ಅವರನ್ನು ವಿಚಾರಣೆಗೆ ಕರೆದಿದ್ದರ ಹಿಂದಿನ ಇಂಟರೆಸ್ಟಿಂಗ್ ಕಾರಣ ಬಹಿರಂಗವಾಗಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗು ಅವರ ಪುತ್ರ ರಾಹುಲ್ ಗಾಂಧಿ, ಯಂಗ್ ಇಂಡಿಯನ್ ಕಂಪನಿಯಲ್ಲಿ ಪ್ರಮುಖ ಷೇರುದಾರರಾಗಿದ್ದು, ಈ ಕಂಪನಿಗೆ ಮಲ್ಲಿಕಾರ್ಜುನ ಖರ್ಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್ನಲಾಗಿದೆ. ಅಚ್ಚರಿಯ ಸಂಗತಿ ಎಂದರೆ ಇವರನ್ನು ಹೊರತುಪಡಿಸಿ ಕಂಪನಿಯಲ್ಲಿ ಬೇರೆ ಯಾವುದೇ ನೌಕರರು ಇಲ್ಲವೆನ್ನಲಾಗಿದ್ದು, ಹೀಗಾಗಿ ಅವರನ್ನಷ್ಟೇ ವಿಚಾರಣೆಗೆ ಕರೆಯಲಾಗಿತ್ತು ಎಂದು ಹೇಳಲಾಗಿದೆ.